Kannada NewsKarnataka NewsLatest

*ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ವಿಚಾರ: ಹೈಕೋರ್ಟ್ ಮಹತ್ವದ ತೀರ್ಪು*

ಪ್ರಗತಿವಾಹಿನಿ ಸುದ್ದಿ: ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡಲು ಮುಂದಾಗಿದ್ದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಇದರಿಂದ ಸರ್ಕಾರಕ್ಕೆ ಭಾರಿ ಮುಖಭಂಗವಾದಂತಾಗಿದೆ.

ಹಿಂದಿ ವಿಷಯದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು ಕಡ್ಡಾಯವಾಗಿ ದಾಖಲಿಸಬೇಕು ಮತ್ತು ಅವುಗಳನ್ನು ಒಟ್ಟು ಫಲಿತಾಂಶದ ಅಂಕಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.

Home add -Advt

ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದಿರುವ ಕೋರ್ಟ್, ಅಂಕಗಳನ್ನು ಕಡ್ಡಾಯವಾಗಿ ಫಲಿತಾಂಶದಲ್ಲಿ ಪ್ರಕಟಿಸುವಂತೆ ನಿರ್ದೇಶನ ನೀಡಿದೆ.

ಹಿಂದಿ ವಿಷಯಕ್ಕೆ ಅಂಕಗಳ ಬದಲಿಗೆ ಕೇವಲ ಎ, ಬಿ, ಸಿ ಅಂತಹ ಗ್ರೇಡ್‌ಗಳನ್ನು ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್ ನಾಯ್ಕ್ ಹಾಗೂ ಇತರ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇಎಸ್ ಇಂದಿರೇಶ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ಸರ್ಕಾರದ ಈ ಕ್ರಮವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಮಾರಕ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಶಿಕ್ಷಣ ಹಕ್ಕು ಮತ್ತು ಪರೀಕ್ಷಾ ನಿಯಮಾವಳಿಗಳ ಪ್ರಕಾರ ಪ್ರತಿ ವಿಷಯದ ಅಂಕಗಳು ಪಾರದರ್ಶಕವಾಗಿರಬೇಕು. ತೃತೀಯ ಭಾಷೆಯನ್ನು ಕೇವಲ ಗ್ರೇಡ್‌ಗೆ ಸೀಮಿತಗೊಳಿಸುವುದು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಪೀಠ ಎಚ್ಚರಿಸಿದೆ.


Related Articles

Back to top button