Kannada NewsKarnataka NewsLatest

*ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ*

ವಿದೇಶಿ ಮಹಿಳೆಯರು ಸೇರಿ 10 ಆರೋಪಿಗಳು ಅರೆಸ್ಟ್

Home add -Advt


ಪ್ರಗತಿವಾಹಿನಿ ಸುದ್ದಿ: ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬರೋಬ್ಬರಿ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ನ್ನು ಪೊಲೀಸರು ಜಪ್ತಿ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿದ ಪೊಲೀಸರು 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದು, ಇಬ್ಬರು ವಿದೇಶಿ ಮಹಿಳೆಯರು ಹಾಗೂ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ನಗರದ ಯಲಹಂಕ, ಡಿ.ಜೆ.ಹಳ್ಳಿ, ಬಾಣಸವಾಡಿ, ಕೋರಮಂಗಲ, ಬೊಮ್ಮನಹಳ್ಳಿ ಹಾಗೂ ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಬಂಧಿತರಿಂದ 5.9 ಕೆಜಿ ಎಂಡಿಎಂಎ , 1.15 ಕೆಜಿ ಕೊಕೇನ್, 21 ಕೆಜಿ ಗಾಂಜಾ ಮತ್ತು 19 ಗ್ರಾಂ ಎಕ್ಸ್‌ಟೆಸಿ ಮಾತ್ರೆಗಳು ಸೇರಿದಂತೆ 11.86 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜೊತೆಗೆ ಕೃತ್ಯಕ್ಕೆ ಬಳಸುತ್ತಿದ್ದ ಒಂದು ದ್ವಿಚಕ್ರ ವಾಹನವನ್ನು ಸೀಜ್ ಮಾಡಲಾಗಿದೆ.

ತನಿಖೆಯಲ್ಲಿ ವಿದೇಶಿ ಮಹಿಳೆಯರು ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿ ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಂದಿದೆ.

Related Articles

Back to top button