Kannada NewsKarnataka NewsLatest

*ಬಸ್-ಕಾರು ಭೀಕರ ಅಪಘಾತ: 6 ಜನರು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘತದಲ್ಲಿ 6 ಜನರು ಸಜೀವದಹನವಾಗಿರುವ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಈ ದುರಂತ ಸಂಭವಿಸಿದೆ. ಬಸ್ ಹಾಗೂ ಕಾರಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, 6 ಜನರು ಸುಟ್ಟು ಕರಕಲಾಗಿದ್ದಾರೆ.

ಸುರಪುರ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button