Belagavi NewsBelgaum NewsCrimeKannada NewsKarnataka NewsNational

*ಕುಖ್ಯಾತ ಬೈಕ್ ಕಳ್ಳನ ಬಂಧನ: 8 ಬೈಕ್ ವಶ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಸರಣಿ ಬೈಕ್ ಕಳ್ಳತನ ಮಾಡಿತ್ತಿದ್ದ ಕುಖ್ಯಾತ ಕಳ್ಳನನ್ನು ಬೆಳಗಾವಿಯ ಯಮಕನಮರ್ಡಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಸಂಜು @ ಸಂಜ್ಯಾ ಮಲ್ಲಪ್ಪಾ ಮೇಕಲಿ (25) ಬಂಧಿತ ಆರೋಪಿ. ಆರೋಪಿಯಿಂದ 8 ಬೈಕ್ ವಶಕ್ಕೆ ಪಡೆಯಲಾಗಿದೆ. 

Home add -Advt

ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗುತ್ತಿದ್ದ ಬೈಕ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತಂಡವು ಕಾರ್ಯಾಚರಣೆ ನಡೆಸಿ, ಸರಣಿ ಕಳ್ಳತನದಲ್ಲಿ ತೊಡಗಿದ್ದ ಕುಖ್ಯಾತ ಹಳೇ ಅಪರಾಧಿಯನ್ನು (MOB) ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಬಂಧಿತ ಆರೋಪಿತಯ ವಿಚಾರಣೆಯ ವೇಳೆ ಆತನು ವಿವಿಧ ಜಿಲ್ಲೆ ಮತ್ತು ರಾಜ್ಯಗಳಲ್ಲಿ ಮೋಜು-ಮಸ್ತಿಗಾಗಿ ಬೈಕ್‌ಗಳನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿತನ ಮಾಹಿತಿಯ ಮೇರೆಗೆ ಒಟ್ಟು 08 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

Related Articles

Back to top button