Kannada NewsKarnataka NewsLatest

*ಮತ್ತೊಂದು ಭೀಕರ ಅಪಘಾತ: KSRP ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಸಂಭವಿಸುತ್ತಿದ್ದು, ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿಯಾಗಿ ಕೆ.ಎಸ್.ಆರ್.ಪಿ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬೂರ್ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಧೆರಪ್ಪ ಅಂಜುಟಗಿ (26) ಮೃತ ಕಾನ್ಸ್ ಟೇಬಲ್.

ಕಲಬುರಗಿಯಿಂದ ಶಿವವಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಸ್ಥಳದಲ್ಲೇ ಧೆರಪ್ಪ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಡಿವೈ ಎಸ್ ಪಿ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button