Kannada NewsKarnataka NewsLatest

*ಮರಕ್ಕೆ ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಬಳಿ ಕರ್ಕಾ ಕ್ರಾಸ್ ನಲ್ಲಿ ಈ ಅಪಘಾತ ಸಂಭವಿಸಿದೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಫಾರೂಖ್ ಸಾಬ್, ಮುದಸೀರ್ ಇಸ್ಮಾಯಿಲ್ ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಂಡೇಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button