*ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನ ಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್’ಎಫ್) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿರುತ್ತದೆ.
ಆಸಕ್ತರು ಏ. 24 .2026 ರೊಳಗಾಗಿ ಬೆಳಗ್ಗೆ 10. ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



