
ಪ್ರಗತಿವಾಹಿನಿ ಸುದ್ದಿ: ಪಿಕಪ್ ವಾಹನ ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಕ್ಕಳು ಸೇರಿ 7 ಜನರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.
ಗುಜರಾತ್ನ ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲೂಕಿನಲ್ಲಿ ಪಿಕಪ್ ವ್ಯಾನ್ ಪಲ್ಟಿಯಾಗಿ ಮೂವರು ಮಕ್ಕಳು ಸೇರಿದಂತೆ 7 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.
ಗಿರ್ನಾರಾ ಗ್ರಾಮದ 30 ಜನರನ್ನು ಪಿಕಪ್ ವಾಹನದಲ್ಲಿ ಮದುವೆಗೆ ಹೋಗುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವ್ಯಾನ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

