
ಪ್ರಗತಿವಾಹಿನಿ ಸುದ್ದಿ: ಸುಮಿತ್ರಾ ಹಾಗೂ ಡೇವಿಡ್ ಎಂಬ ದಂಪತಿಯ ಏಕಾಏಕಿ ಶವ ಪತ್ತೆಯಾಗಿದ್ದು, ಇಬ್ಬರ ಸಾವಿಗೆ ನಿಖರ ಕಾರಣ ತಿಳಿದು ಬಂದಿದ್ದಲ್ಲ.
ಸಿಲಿಕಾನ್ ಸಿಟಿ ಬೆಂಗಳೂರಿನ ಆರ್.ಟಿ.ನಗರದ ಗಂಗೇನಹಳ್ಳಿಯ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದೆ.
ಇನ್ನು ಸ್ಥಳಕ್ಕೆ ಆರ್ಟಿ ನಗರ ಪೊಲೀಸರು ಮತ್ತು ಸೊಕೊ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಡೇವಿಡ್, ಸುಮಿತ್ರಾಳನ್ನ ಉಸಿರುಗಟ್ಟಿಸಿ ಕೊಂದು ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಇನ್ನು ಪತಿ ಡೇವಿಡ್ ಕೈಗಳ ಮೇಲೆ ಪ್ರತಿರೋಧವೊಡ್ಡಿ ತರಚಿರುವ ಗುರುತು ಸಹ ಕಂಡುಬಂದಿದೆ. ಹೀಗಾಗಿ ಡೇವಿಡನೇ ಪತ್ನಿಯನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸರು ಶಂಕಿಸಿದ್ದಾರೆ.
ಮೇಲ್ನೋಟಕ್ಕೆ ಕೌಟುಂಬಿಕ ಕಲಹ ಎನ್ನಲಾಗುತ್ತಿದೆಯಾರೂ ಮರಣೋತ್ತರ ಪರೀಕ್ಷೆ ವರದಿ ಹಾಗೂ ಪೊಲೀಸರ ತನಿಖೆ ಬಳಿಕ ಸಾವಿನ ರಹಸ್ಯ ಬಯಲಿಗೆ ಬರಲಿದೆ.

