Election NewsLatestNationalPolitics

*ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಮತದಾನ ಆರಂಭವಾಗಿದೆ.

ತಮಿಳುನಾಡಿ ಎಲ್ಲಾ 234 ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ನಡೆಯಲಿದ್ದು, ಇಂದು ಮೊದಲ ಹಂತದ ಚುನಾವಣೆ ನಡೆಯುತ್ತಿದೆ.

ತಮಿಳುನಾಡಿನಲ್ಲಿ ಎಂ.ಕೆ. ಸ್ಟಾಲಿನ್ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ತಮಿಳುನಾಡಿನಲ್ಲಿ 4,023 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಒಟ್ಟು 57,343,291 ಮತದಾರರು ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಮೇ 4 ರಂದು ಎಣಿಕೆ ನಡೆಯಲಿದೆ.

Home add -Advt

ನಟ ವಿಜಯ್ ಅವರ ಪಕ್ಷ ಟಿವಿಕೆ ಪ್ರವೇಶವು ಚುನಾವಣೆಯನ್ನು ಇನ್ನಷ್ಟು ಆಸಕ್ತಿದಾಯಕವಾಗಿಸಿದೆ, ಇದು ಮತ ಹಂಚಿಕೆಯ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿದೆ.

ಎರಡೂ ರಾಜ್ಯಗಳಲ್ಲಿಯೂ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮತದಾರರು ಉತ್ಸಾಹದಿಂದಲೇ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ.

Related Articles

Back to top button