Election NewsKannada NewsNationalPolitics

*ತಮಿಮಿಳುನಾಡು ಚುನಾವಣೆ: ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ ನಟ ರಜನಿಕಾಂತ್, ಕಮಲ್ ಹಾಸನ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನಲ್ಲಿ ಇಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣಾ ಮತದಾನ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದ ಉತ್ಸಾಹದಿಂದಲೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಿಗೂ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈ ಬಾರಿ ನಟ ದಳಪತಿ ವಿಜಯ್ ತಮ್ಮದೇ ಹೊಸ ಪಕ್ಷ ಟಿವಿಕೆ ಪಕ್ಷ ಸ್ಥಾಪಿಸಿ ಆ ಮೂಲಕ ಸ್ಪರ್ಧಿಸಿರುವುದು ಮಹತ್ವ ಪಡೆದುಕೊಂಡಿದೆ. ಇದು ಮತ ಹಂಚಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.

ತಮಿಳುನಾಡಿನಲ್ಲಿ 4,023 ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಒಟ್ಟು 57,343,291 ಮತದಾರರು ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಲಿದ್ದಾರೆ. ಮೇ 4 ರಂದು ಎಣಿಕೆ ನಡೆಯಲಿದೆ.

ಈಗಾಗಲೇ ಎಲ್ಲಾ ಕ್ಷೇತ್ರಗಳಲ್ಲಿಯೂ ಮತದಾನ ಚುರುಕುಗೊಂಡಿದೆ. ರಾಜಕೀಯ ಗಣ್ಯರು, ಸಿನಿ ತಾರೆಯರು, ಘಟನಾನುಘಟಿ ನಾಯಕರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

Home add -Advt

ಸೂಪರ್ ಸ್ಟಾರ್ ರಜನಿಕಾಂತ್ ಸಾಮಾನ್ಯರಂತೆ ಬಂದು ಚೆನ್ನೈನ ಸ್ಟೆಲ್ಲಾ ಮೇರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು, ರಜನಿಕಾಂತ್ ಪತ್ನಿ, ಮಕ್ಕಳು ಕೂಡ ತಮ್ಮ ಹಕ್ಕು ಚಲಾಯಿಸಿದ್ದಾರೆ. ಆ ಬಳಿಕ ಅವರು ಮತ ಹಾಕಿದ ಬೆರಳನ್ನು ಜನರತ್ತ ತೋರಿಸಿದರು.

ಇದೇ ವೇಳೆ ನಟ ಕಮಲ್ ಹಾಸನ್ ತಮ್ಮ ಪುತ್ರಿ ಶೃತಿ ಹಾಸನ್ ಜೊತೆ ಆಗಮಿಸಿ ಮತದಾನ ಮಾಡಿದ್ದಾರೆ. ನಟ ದಳಪತಿ ವಿಜಯ್, ಅಜಯ್, ಖುಷ್ಬೂ, ಸೇರಿದಂತೆ ಹಲವು ನಾಯಕರು ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ.

Related Articles

Back to top button