HealthKannada NewsKarnataka NewsPolitics

*ಸಚಿವ ಸುಧಾಕರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿದ್ದು, ಸದ್ಯ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

Home add -Advt

ಖ್ಯಾತ ವೈದ್ಯ ಡಾ. ವೆಂಕಟಗಿರಿ ಅವರ ನೇತೃತ್ವದ ತಂಡ ಸಚಿವರಿಗೆ ಚಿಕಿತ್ಸೆ ನೀಡುತ್ತಿದೆ. ಸೋಂಕು ತೀವ್ರವಾಗಿರುವುದರಿಂದ ವೈದ್ಯರು ಶ್ವಾಸಕೋಶ ಕಸಿ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

ಸಚಿವ ಸುಧಾಕರ್ ಅವರ ದೇಹವು ಚಿಕಿತ್ಸೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದಿಸುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ ಸುಮಾರು 9:30ರ ವೇಳೆಗೆ ಅವರ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಕಂಡುಬಂದಿದೆ. 

Related Articles

Back to top button