EducationKarnataka NewsLatest

*ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಮತ್ತೆ ಪ್ರಮಾದ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಸಿಇಟಿ (KCET) ಪರೀಕ್ಷೆಗಳು ನಡೆಯುತ್ತಿದ್ದು, ಈಬಾರಿಯೂ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪ್ರಮಾದವೆಸಗಿದ್ದಾರೆ. ಇದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಸಿಇಟಿ ಪರೀಕ್ಷೆ ಮೊದಲ ದಿನವೇ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಘಟನೆ ನಡೆದಿದೆ. ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು =ಬಲವಂತವಾಗಿ ತೆಗೆಸಿ ಪರೀಕ್ಷೆಗೆ ಅವಕಾಶ ನೀಡಿದ್ದಾರೆ. ಐದು ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪರೀಕ್ಷೆ ಮೊದಲ ದಿನ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆಯುವಂತೆ ಸೂಚಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ಗದರಿದ್ದಾರೆ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಪರೀಕ್ಷಾ ಕೊಠಡಿಗೆ ಕಳುಹಿಸಿದ್ದರು.

Home add -Advt

ಇಂದು ಪರೀಕ್ಷಾ ಕೇಂದ್ರದ ಬಳಿ ಪೋಷಕರು, ಧಾರ್ಮಿಕ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಧಾರ್ಮಿಕ ಹಕ್ಕಿಗೆ ಧಕ್ಕೆ ತರುವ ಇಂತಹ ಕೃತ್ಯಗಳು ನಿಲ್ಲಬೇಕು. ಸಿಐಟಿ ಪರೀಕ್ಷಾ ನಿಯಮದಲ್ಲಿ ಜನಿವಾರ ತೆಗೆಯುವಂತೆ ಹೇಳಿಲ್ಲವಾದರೂ ಸಿಬ್ಬಂದಿಗಳು ಜನಿವರ ತೆಗೆಸುತ್ತಿದ್ದಾರೆ. ಅಲ್ಲದೇ ಕಳೆದಬಾರಿ ಇಂತಹ ಘಟನೆಯಾದಾಗ ನ್ಯಾಯಾಲಯ ಕೂಡ ಜನಿವಾರ ತೆಗೆಯದಂತೆ ಸೂಚಿಸಿತ್ತು. ಈಗ ಮತ್ತೆ ಅದೇ ರೀತಿ ಗಹ್ಟನೆ ಮರುಕಳಿಸಿದ್ದು, ಇದು ಖಂಡನೀಯ ಎಂದು ಕಿಡಿಕಾರಿದ್ದಾರೆ.


Related Articles

Back to top button