Karnataka NewsLatestPolitics

*ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣ: ಸಚಿವ ಸುಧಾಕರ್ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಸಚಿವ ಡಾ.ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಯಾವುದೇ ಅಧಿಕೃತ ವರದಿ ಬಂದಿಲ್ಲ ಎಂದು ತಿಳಿಸಿದ್ದಾರೆ.

Home add -Advt

ಆದಾಗ್ಯೂ, ಆರೋಪಗಳು ನಿಜವೆಂದು ಸಾಬೀತಾದರೆ ತೀವ್ರ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಪರೀಕ್ಷೆಗಳನ್ನು ಖಾಸಗಿ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನಡೆಸಲಾಗುತ್ತದೆ, ಮತ್ತು ಸಿಬ್ಬಂದಿಯನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಸಿಬ್ಬಂದಿ ಅತಿರೇಕದ ವರ್ತನೆ ತೋರಿದ್ದರೆ ಅಥವಾ ಉದ್ದೇಶಪೂರ್ವಕವಾಗಿ ವ್ಯವಸ್ಥೆಗೆ ಕೆಟ್ಟ ಹೆಸರು ತರಲು ಪ್ರಯತ್ನಿಸಿದ್ದರೆ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


Related Articles

Back to top button