Kannada NewsLatestNational

*ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲು: ಕೆಲ ಸಮಯದಲ್ಲೇ ಮಗುವಿಗೆ ಜನ್ಮ ನೀಡಿದ ಬಾಲಕಿ*

ಪ್ರಗತಿವಾಹಿನಿ ಸುದ್ದಿ: ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ ಕೆಲ ಸಮಯದಲ್ಲೇ ಹೆರಿಗೆಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.

ಪಂಜಾಬ್ ನ ಜಲಂಧರ್​ನಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಾಮಾನ್ಯ ಹೊಟ್ಟೆನೋವು ಎಂದು ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಗರ್ಭಿಣಿ ಎಂಬ ವಿಷಯ ತಿಳಿದು ಕುಟುಂಬಸ್ಥರು ಶಾಕ್ ಆಗಿದ್ದಾರೆ. ಅಲ್ಲದೇ ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.

Home add -Advt

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಮೃತಸರ ಮೂಲದ ಯುವಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ಚಿಕ್ಕಮ್ಮ ನೀಡಿರುವ ದೂರಿನ ಪ್ರಕಾರ, ಬಾಲಕಿಗೆ ಸುಮಾರು ಒಂದೂವರೆ ತಿಂಗಳಿನಿಂದ ಹೊಟ್ಟೆನೋವು ಎಂದು ಹೇಳುತ್ತಿದ್ದಳು. ಮೊದಲು ಜಲಂಧರ್‌ನ ನೂರ್ಮಹಲ್‌ನಲ್ಲಿರುವ ಖಾಸಗಿ ವೈದ್ಯರ ಬಳಿ ತಪಾಸಣೆ ನಡೆಸಿ ಔಷಧಿ ಪಡೆಯಲಾಗಿತ್ತು. ಆದರೆ, ಏಪ್ರಿಲ್ 19 ರಂದು ನೋವು ತೀವ್ರಗೊಂಡಾಗ ಬಾಲಕಿಯನ್ನು ಫಿಲ್ಲೌರ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬಾಲಕಿಯನ್ನು ಪರೀಕ್ಷಿಸಿದ ಫಿಲ್ಲೌರ್‌ನ ವೈದ್ಯರು ಪರಿಸ್ಥಿತಿ ಗಂಭೀರವಾಗಿರುವುದರಿಂದ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ. ಅಲ್ಲಿ ನಡೆಸಿದ ಹೆಚ್ಚಿನ ತಪಾಸಣೆಯಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ.

ಬಾಲಕಿಯನ್ನು ವಿಚಾರಿಸಿದಾಗ, ಅಮೃತಸರದ ಯುವಕನೊಬ್ಬ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಚಿಕ್ಕಮ್ಮ, ಜಲಂಧರ್ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಎಫ್​ಐಆರ್ ದಾಖಲಿಸಲಿಸಲಾಗಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ.


Related Articles

Back to top button