Belagavi NewsBelgaum NewsKarnataka NewsLatestPolitics
*ಶಾಸಕ ಲಕ್ಷ್ಮಣ ಸವದಿ ಕಣ್ಣೆದುರೇ ಹೃದಯಾಘಾತದಿಂದ ಸಾವನ್ನಪ್ಪಿದ ಆಪ್ತ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶಾಸಕ ಲಕ್ಷ್ಮಣ ಸವದಿ ಅವರ ಆತ್ಮೀಯ ಬೆಂಬಲಿಗರೊಬ್ಬರು ಶಾಸಕರ ಕಣ್ಣೆದುರೇ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಶಾಸಕ ಲಕ್ಷ್ಮಣ್ ಸವದಿ ಎದುರೇ ಅವರ ಆಪ್ತ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾವಸಾಬ ಬೇವನೂರ (65) ಮೃತ ದುರ್ದೈವಿ. ಗ್ರಾಮದಲ್ಲಿ ನಡೆದ ಗೃಹ ಪ್ರವೇಶ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶಾಸಕರು ತೆರಳಿದ್ದರು. ಈ ಸಂದರ್ಭದಲ್ಲಿ ಅವರ್ ಆಪ್ತ ಬೆಂಬಲಿಗ ರಾವಸಾಬ ಅವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಶಾಸಕರೇ ಮುತುವರ್ಜಿ ವಹಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದರೂ ಸಹ, ಚಿಕಿತ್ಸೆ ಫಲಕಾರಿಯಾಗದೆ ರಾವಸಾಬ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ತಮ್ಮ ಬಹುಕಾಲದ ಆಪ್ತನನ್ನು ಕಳೆದುಕೊಂಡ ಶಾಸಕ ಲಕ್ಷ್ಮಣ ಸವದಿ ಕಂಬನಿ ಮಿಡಿದಿದ್ದಾರೆ.




