Belagavi NewsBelgaum NewsKannada NewsNational

*ಚಾರ್ಮಿನಾರ್ ಎಕ್ಸ್‌ಪ್ರೆಸ್‌‌ನಲ್ಲಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಇಂದು ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿರುವ ಘಟನೆ ತೆಲಂಗಾಣದ ಅಲೆರ್ ರೈಲು ನಿಲ್ದಾಣದ ಬಳಿ ನಡೆದಿದೆ.

ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆ ಒಂದು ಬೋಗಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಇದರಿಂದ ಭೀತಿಗೊಂಡ ಪ್ರಯಾಣಿಕರು ತಕ್ಷಣವೇ ಹೊರಗೆ ಓಡಿದ್ದಾರೆ. 

Home add -Advt

ರೈಲಿನ S5 ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಎಚ್ಚೆತ್ತ ರೈಲ್ವೆ ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗಿರುವ ಬಗ್ಗೆ ಈವರೆಗೆ ಅಧಿಕೃತ ವರದಿಗಳಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದ್ದಾರೆ.

ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ಪ್ರಾಥಮಿಕ ತನಿಖೆಯಲ್ಲಿ ಶಾರ್ಟ್ ಸರ್ಕ್ಯೂಟ್ ಕಾರಣವಿರಬಹುದು ಎಂದು ಶಂಕಿಸಲಾಗಿದೆ. 

Related Articles

Back to top button