
ಪ್ರಗತಿವಾಹಿನಿ ಸುದ್ದಿ: ಶಿಕ್ಷಕಿಯೊಬ್ಬರು ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಕೆ.ಎ.ರೋಹಿಣಿ ಆತ್ಮಹತ್ಯೆಗೆ ಶರಣಾದ ಸರ್ಕಾರಿ ಶಾಲೆ ಶಿಕ್ಷಕಿ. ರೋಹಿಣಿ ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿದ್ದರು.
ಇಂದು ಇದ್ದಕ್ಕಿದ್ದಂತೆ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಡಿಕೇರಿ ಗ್ರಾಮೀಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


