EducationKarnataka NewsLatest

*ವಿದ್ಯಾರ್ಥಿಗಳ ಗಮನಕ್ಕೆ: PGCET ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದಿನಾಂಕ ವಿಸ್ತರಿಸಿದೆ.

ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಾಹಿತಿ ನೀಡಿದ್ದಾರೆ. ಎಂಬಿಎ, ಎಂಸಿಎ, ಎಂಇ, ಎಂ.ಟೆಕ್ ಮತ್ತು ಎಂ.ಆರ್ಕಿಟೆಕ್ಚರ್ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏ.30ರವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಶುಲ್ಕ ಪಾವತಿಗೆ ಮೇ 5 ಕೊನೆ ದಿನವಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಿದ್ದು, ಪುನಃ ಮುಂದೂಡುವುದಿಲ್ಲ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

Home add -Advt

Related Articles

Back to top button