ನಾನೊಬ್ಬನೇ ಮಾಸ್ಟರ್ ಮೈಂಡ್ ಎಂದ ಬಾಂಬರ್ ಆದಿತ್ಯ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಆದಿತ್ಯ ರಾವ್ ಬೆಂಗಳೂರಿನಲ್ಲಿ ಡಿಜಿ ಐಜಿಪಿ ಮುಂದೆ ಶರಣಾಗಿದ್ದು, ಘಟನೆ ಹಿಂದೆ ಉಗ್ರರ ಕೈವಾಡವಿಲ್ಲ. ತಾನೊಬ್ಬನೇ ಈ ಕೃತ್ಯವೆಸಗಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.

ಆರೋಪಿ ಆದಿತ್ಯ ರಾವ್ ನನ್ನು ವಶಕ್ಕೆ ಪಡೆದಿರುವ ಮಂಗಳೂರು ಪೊಲೀಸರು, ಉತ್ತರ ಎಸಿಪಿ ಕಛೇರಿಯಲ್ಲಿ ತೀವ್ರ ವಿಚರಾಣೆಗೊಳಪಡಿಸಿದ್ದು, ಈ ವೇಳೆ ಆತ ಎಲ್ಲದಕ್ಕೂ ಸ್ಪಷ್ಟನೆ ನೀಡಿದ್ದಾನೆ. ಬಾಂಬ್ ಇಟ್ಟ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದವು. ಸಿಕ್ಕಿ ಬೀಳುವ ಭಯ ಶುರುವಾಗಿತ್ತು. ಘಟನೆ ಬಳಿಕ ತಪ್ಪಿನ ಅರಿವಾಗಿತ್ತು. ನಾನು ದೇಶದ್ರೋಹಿ ಕೆಲಸ ಮಾಡುವವನಲ್ಲ. ವ್ಯವಸ್ಥೆ ಹಾಳಾಗಿರುವುದನ್ನು ಸರಿಪಡಿಸಬೇಕೆಂದು ಬಾಂಬ್ ಇಟ್ಟೆ ಎಂದಿದ್ದಾನೆ.

ಈ ಕೃತ್ಯದ ಹಿಂದೆ ಬೇರೆ ಯಾರ ಕೈವಾಡವೂ ಇಲ್ಲ. ಬಾಂಬ್ ಇಡುವ ಬಗ್ಗೆ ನಾನು ಯಾರಿಗೂ ಮಾಹಿತಿ ನೀಡಿಲ್ಲ. ಒಂದೇ ಬಾಂಬ್ ತಯಾರಿಸಿ ಇಟ್ಟಿದ್ದೆ. ತಾನೊಬ್ಬನೇ ಮಾಸ್ಟರ್ ಮೈಂಡ್ ಎಂದು ತಿಳಿಸಿದ್ದಾನೆ. ಅಲ್ಲದೇ ಇತ್ತೀಚೆಗೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹೊಡೆದು ಬಂಧಿಸುವ ಪ್ರಕರಣಗಳು ಹೆಚ್ಚಾಗಿವೆ. ನನಗೂ ಗುಂಡು ಹೊಡೆಯಬಹುದು ಎಂಬ ಭಯವಿತ್ತು. ಹೀಗಾಗಿ ಡಿಜಿಪಿ ಕಚೇರಿಗೆ ಬಂದು ಶರಣಾಗಿರುವುದಾಗಿ ಹೇಳಿದ್ದಾನೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button