Kannada NewsKarnataka NewsLatest

*ಹೇಮಾವತಿ ನಾಲೆಗೆ ಬಿದ್ದ ಕಾರು: ತಾಯಿ ಹಾಗೂ ಒಂದೂವರೆ ವರ್ಷದ ಮಗ ಸಾವು*

ಪ್ರಗತಿವಾಹಿನಿ ಸುದ್ದಿ: ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ, ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಪ್ರಿಯಾಂಕ (30), ವೈಭವ್ (ಒಂದೂವರೆ ವರ್ಷ) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ ಮಂಜುನಾಥ್, ಪತ್ನಿ ಪ್ರಿಯಾಂಕ, ಪುತ್ರ ವೈಭವ್, ಸಂಬಂಧಿಗಳಾದ ಚಂದನ್, ದಿಲೀಪ್, ದೇವರಾಜು KA-02-MT-2690 ನಂಬರ್‌ನ ಸ್ವಿಫ್ಟ್ ಕಾರಿನಲ್ಲಿ ಧರ್ಮಸ್ಥಳಕ್ಕೆ ಹೋಗಿ ವಾಪಾಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಹೇಮಾವತಿ ನಾಲೆಗೆ ಬಿದ್ದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt


Related Articles

Back to top button