Kannada NewsKarnataka NewsLatest

*ಟ್ಯಾಂಕರ್ ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಪ್ರವಾಸಿಗರ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಮೂಲದ 21 ವರ್ಷದ ರಂಗನಾಥ್, 25 ವರ್ಷದ ಮನೋಜ್ ಹಾಗೂ ಉಮೇಶ್ ಯಾನ್ ಮೃತ ದುರ್ದೈವಿಗಳು. ವೇಗವಾಗಿ ಬಂದ ಮಿನಿ ಬಸ್ ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿಯಾಗಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಬಸ್ ನಲ್ಲಿ 47 ವಿದ್ಯಾರ್ಥಿಗಳಿದ್ದರು. ಮೃತರಲ್ಲಿ ಅಡುಗೆ ಸಹಾಯಕ ಹಾಗೂ ಚಾಲಕ ಹಾಗೂ ಕ್ಲೀನರ್ ಸೇರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button