CrimeKannada NewsKarnataka NewsLatest

*ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ*

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದ ಪತಿ ಬಳಿಕ ತಾನೇ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.

ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲಸ ಮುಗಿಸಿ ಹೆಂಡತಿ ತಡವಾಗಿ ಮನೆಗೆ ಬರುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಮೇಲೆ ಅನುಮಾನಗೊಂಡ ಪತಿ ಮಹಾಶಯ ಪತ್ನಿಯನ್ನೇ ಕೊಲೆ ಮಾಡಿದ್ದಾನೆ.

Home add -Advt

24 ವರ್ಷದ ಪುಷ್ಫ ಕೊಲೆಯಾದ ಪತ್ನಿ. ಮಹೇಶ್ ಪತ್ನಿಯನ್ನೇ ಕೊಲೆಗೈದ ಪತಿ. ಕೊಡಲಿಯಿಂದ ಪತ್ನಿಯನ್ನು ಹೊಡೆದು ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಪುಷ್ಫಾ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದಿಂದಾಗಿ ಮನೆಗೆ ಬರುವುದು ರಾತ್ರುಯಾಗುತ್ತಿತ್ತು. ಇದೇ ವಿಚಾರಕ್ಕೆ ಪತಿ-ಪತ್ನಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ನಿನ್ನೆ ರಾತ್ರಿಯೂ ಪುಷ್ಫ ಮನೆಗೆ ಬರುವುದು ರಾತ್ರಿಯಾಗಿದೆ. ಎಂದಿನಂತೆ ಪತಿ ಕ್ಯಾತೆ ತೆಗೆದಿದ್ದಾನೆ. ಕೋಪದ ಬರದಲ್ಲಿ ಪುಷ್ಪ ತಲೆಗೆ ಕೊಡಲಿಯಿಂದ ಹೊಡೆದಿದ್ದಾನೆ. ಕೆಳಗೆ ಬಿದ್ದ ಬಳಿ ಸುಮ್ಮನಾಗದ ಪತಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ.

ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ನರಸಿಂಹರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button