CrimeKannada NewsKarnataka NewsLatest

*ಪರಪ್ಪನ ಅಗ್ರಹಾರ ಜೈಲಿನೊಳಗಿಂದಲೇ ಕೈದಿಯಿಂದ ಪತ್ನಿಗೆ ವಿಡಿಯೋ ಕಾಲ್: ಮತ್ತೊಂದು ವಿಡಿಯೋ ವೈರಲ್*

ಪ್ರಗತಿವಾಹಿನಿ ಸುದ್ದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ರಾಜಾರೋಷವಾಗಿ ಐಷಾರಾಮಿ ಜೀವನ, ಕಳ್ಳಾಟ ನಡೆಸುತ್ತಿರುವ ಬಗ್ಗೆ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಕೈದಿಯೊಬ್ಬ ಜೈಲಿನಲ್ಲಿದ್ದುಕೊಂಡೇ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿರುವ ಘಟನೆ ಬೆಳಕಿಗೆ ಬಂದಿದೆ.

ಜೈಲಿನೊಳಗಿದ್ದೇ ಕೆಲ ಕೈದಿಗಳು ಎಣ್ಣೆ ಪಾರ್ಟಿ, ಬರ್ತ್ ಡೇ ಆಚರಣೆ, ಗಾಂಜಾ, ತಂಬಾಕು ಮುಂತಾದ ಅಕ್ರಮಗಳನ್ನು ನಡೆಸುತ್ತಿರುವುದು ಈ ಹಿಂದೆಯೂ ಬಯಲಾಗಿತ್ತು. ಇದರ ಬೆನ್ನಲ್ಲೇ ಜೈಲಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಇದೀಗ ಕೇಂದ್ರ ಕಾರಾಗ್ರಹದಲ್ಲಿ ಮತ್ತೊಮ್ಮೆ ವಿಚಾರಣಾಧೀನ ಕೈದಿಯೊಬ್ಬ ಸೆಲ್​ನಲ್ಲಿ ಕುಳಿತೇ ತನ್ನ ಪತ್ನಿಗೆ ವೀಡಿಯೋ ಕಾಲ್ ಮಾಡಿರುವ ಘಟನೆ ಬಹಿರಂಗವಾಗಿದೆ.

Home add -Advt

ವಿಚಾರಣಾಧೀನ ಖೈದಿಯಾಗಿದ್ದ ಅಕ್ಬರ್, ಜೈಲಿನ ಅಧಿಕಾರಿಗಳ ಕಣ್ಣು ತಪ್ಪಿಸಿ ಮೊಬೈಲ್ ಬಳಸುತ್ತಿದ್ದ ಎನ್ನಲಾಗಿದೆ. ಈತ ಜೈಲಿನ ಒಳಭಾಗದಿಂದಲೇ ಪತ್ನಿಗೆ ವಿಡಿಯೋ ಕಾಲ್ ಮಾಡಿ ಮಾತುಕತೆ ನಡೆಸಿದ್ದ. ಆಕೆಯ ಪತ್ನಿ ಈ ವಿಡಿಯೋ ಕಾಲ್ ಅನ್ನು ಸ್ಕ್ರೀನ್ ರೆಕಾರ್ಡ್ ಮಾಡಿ, ಏಪ್ರಿಲ್ 9 ರಂದು ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಳು. ಏಪ್ರಿಲ್ 28 ರಂದು ಅಕ್ಬರ್ ಜೈಲಿನಿಂದ ಬಿಡುಗಡೆಯಾಗಿದ್ದು, ಆತ ರಿಲೀಸ್ ಆದ ವಿಡಿಯೋವನ್ನೂ ಪತ್ನಿ ಹಂಚಿಕೊಂಡಿದ್ದಳು. ಸದ್ಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಆಕೆ ಇನ್‌ಸ್ಟಾದಿಂದ ವಿಡಿಯೋ ಡಿಲೀಟ್ ಮಾಡಿದ್ದಾಳೆ.

ಪರಪ್ಪನ ಅಗ್ರಹಾರದಲ್ಲಿ ಜೈಲಿನಲ್ಲಿ ಕಳೆದ ನವೆಂಬರ್‌ನಲ್ಲಿ ಜೈಲಿನ ಒಳಗಿನ ಹೈಫೈ ಲೈಫ್ ವಿಡಿಯೋಗಳು ಹೊರಬಂದಾಗ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು.

Related Articles

Back to top button