Belagavi NewsBelgaum NewsKannada NewsKarnataka NewsPolitics

*ಮೇ.9 ರಂದು ‘ಬಿ.ಎಸ್.ವೈ. ಅಭಿಮಾನೋತ್ಸವ: ಪೂರ್ವಭಾವಿ ಸಭೆ ನಡೆಸಿದ ಬೆಳಗಾವಿ ಮುಖಂಡರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಪ್ರಯುಕ್ತ ಮೇ 9 ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ. ಅಭಿಮಾನೋತ್ಸವ’ ಕಾರ್ಯಕ್ರಮದ ಪೂರ್ವಭಾವಿ ಸಭೆ ಬೆಳಗಾವಿ ಗೋಮಟೇಶ ವಿದ್ಯಾಪೀಠದಲ್ಲಿ ಜರುಗಿತು.

 ಮುಖಂಡರು ‘ಬಿ.ಎಸ್.ವೈ. ಅಭಿಮಾನೋತ್ಸವ’ದ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದರು.

ನಂತರ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರು ಮಾತನಾಡಿ, ಯಡಿಯೂರಪ್ಪ ಅವರ ಸುದೀರ್ಘ ರಾಜಕೀಯ ಹೋರಾಟವನ್ನು ಮೆಲುಕು ಹಾಕುವುದು ಮತ್ತು ರಾಜ್ಯ ಬಿಜೆಪಿಗೆ ಹೊಸ ಶಕ್ತಿ ತುಂಬುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಮಾಜಿ ಶಾಸಕ ಸಂಜಯ್ ಪಾಟೀಲ ಅವರು ಮಾತನಾಡಿ, ಇದು ಪಕ್ಷಾತೀತ ಕಾರ್ಯಕ್ರಮ ಇದು ಕೇವಲ ಒಂದು ಪಕ್ಷಕ್ಕೆ ಸೀಮಿತವಾಗದೇ ಎಲ್ಲಾ ವರ್ಗದ ಜನರು ಮತ್ತು ಮಠಾಧೀಶರನ್ನು ಒಳಗೊಂಡ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.

Home add -Advt

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. 

Related Articles

Back to top button