CrimeKarnataka NewsLatest

*ಆರ್ಥಿಕ ಸಂಕಷ್ಟ ಸರಿಪಡಿಸಲು ಪೂಜೆ, ದೀಕ್ಷೆ ನೆಪದಲ್ಲಿ ಜ್ಯೋತಿಷಿಯಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ: ಮಾಟ-ಮಂತ್ರ ಮಾಡಿಸುವುದಾಗಿ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಡೋಂಗಿ ಜ್ಯೋತಿಷಿಗಳು, ಗಿಳಿಶಾಸ್ತ್ರದ ಮೂಲಕ ವಂಚಿಸುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲೋರ್ವ ಜ್ಯೋತಿಷಿ, ಬ್ಯೂಟಿಷಿಯನ್ ಮಹಿಳೆಗೆ ಆರ್ಥಿಕ ಸಂಕಷ್ಟ ಸರಿಪಡಿಸಿ ಅಭಿವೃದ್ಧಿಗಾಗಿ ಪೂಜೆ ಮಾಡಬೇಕು, ದೀಕ್ಷೆ ನೀಡುತ್ತೇನೆ ಎಂದು ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ತಾನು ಹೇಳಿದಂತೆ ಕೇಳದಿದ್ದರೆ ಗಂಡ ಹಾಗೂ ಮಗನ ಮೇಲೆ ಮಾಟ-ಮಂತ್ರ ಅಮಡಿಸಿ ರಕ್ತ ಕಾರಿಕೊಂಡು ಅವರು ಸಾಯುವಂತೆ ಮಾಡುತ್ತೇನೆ ಎಂದು ಬೆದರಿಸಿ ಮಹಿಳೆ ಮೇಲೆ ದೌರ್ಜನ್ಯವೆಸಗಿದ್ದಾನೆ ಜ್ಯೋತಿಷಿ. ಸಂತ್ರಸ್ತ ಮಹಿಳೆ ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಆರೋಪಿ ಮೋಹನ್ ಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್ ಆಗಿದ್ದಾನೆ.

ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ.
ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

Home add -Advt

ವಿಷಯ ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಬೆದರಿಕೆಯೊಡ್ಡಿದ್ದಾನೆ. ಫೆಬ್ರವರಿ 10ರಂದು ದೀಕ್ಷೆ ನೀಡುವುದಾಗಿ ಹೇಳಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ನಾಶ ಮಾಡುತ್ತೇನೆ ಎಂದು ಬೆದರಿಸಿದ್ದಾನೆ.

ಕಾಮುಕ ಜ್ಯೋತಿಷಿಯ ಅಟ್ಟಹಾಸದಿಂದ ನೊಂದ ಮಹಿಳೆ ಕೊನೆಗೂ ಪೊಲೀಸರಿಗೆ ದೂರು ನೀಡಿದ್ದು, ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Related Articles

Back to top button