Kannada NewsKarnataka NewsLatest

*7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮತ್ತೆ ಹೃದಯಾಘಾತದ ಸಾವು-ನೋವುಗಳು ಹೆಚ್ಚುತ್ತಿವೆ. 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪಾಲಿ ಗವಳಿವಾಡ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. 13 ವರ್ಷದ ಗಂಗು ಗವಳಿ ಸಾವನ್ನಪ್ಪಿರುವ ವಿದ್ಯಾರ್ಥಿನಿ.

ಮೃತ ವಿದ್ಯಾರ್ಥಿನಿಗೆ ಯಾವುದೇ ಕಾಯಿಲೆಗಳು ಇರಲಿಲ್ಲ. ಎಲ್ಲಾ ಮಕ್ಕಳಂತೆ ನಿತ್ಯ ಆಟ-ಪಾಠಗಳಲ್ಲಿ ತೊಡಗಿಕೊಂಡಿದ್ದಳು. ನಿನ್ನೆ ಸಂಜೆವರೆಗೂ ಮಕ್ಕಳೊಂದಿಗೆ ಆಟ ಆಡಿದ್ದಳು. ಇಂದು ಬೆಳಿಗ್ಗೆ ಎದ್ದಾಗ ವಾಂತಿಯಾಗಿದೆ. ವಾಂತಿ ಮಾಡಿಕೊಂಡ ಕೆಲ ಸಮಯದಲ್ಲೇ ವಿದ್ಯಾರ್ಥಿನಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button