Kannada NewsKarnataka NewsLatest

BREAKING: ಮರಳು ತುಂಬಿದ್ದ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸಾವು

ಪ್ರಗತಿವಾಹಿನಿ ಸುದ್ದಿ: ಮರಳು ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಮೂರೂವರೆ ವರ್ಷದ ಮೋಹಿನ್ ಝುಜಾನ್, ಮುನಿರಾ (45) ಹಾಗೂ ಕಾರು ಚಾಲಕ ಮುನೀರ್ ಮೃತ ದಿರ್ದೈವಿಗಳು. ಸಾನಿಯಾ ಮಿರ್ಜಾ, ಸಾಹಲ್ ಪರ್ವಿನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button