
ಪ್ರಗತಿವಾಹಿನಿ ಸುದ್ದಿ: ತಿಂಡಿ ಕೊಡಿಸುವುದಾಗಿ ಹೇಳಿ ನಾಲ್ಕು ವರ್ಷದ ಮಗುವನ್ನು ಕರೆದೊಯ್ದ 65 ವರ್ಷದ ವೃದ್ಧನೊಬ್ಬ ಆಕೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಹೇಯ ಘಟನೆ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ಅಜ್ಜಿಯ ಮನೆಗೆ ಬಂದಿದ್ದ ಬಾಲಕಿಯನ್ನು ತಿಂಡಿ ಕೊಡಿಸುವುದಾಗಿ ನಂಬಿಸಿ ದುರುಳ ಕರೆದೊಯ್ದಿದ್ದಾನೆ. ಬಾಲಕಿಯನ್ನು ದನದ ಕೊಟ್ಟಿಗೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.
ಬಳಿಕ ಬಾಲಕಿ ಶವವನ್ನು ಕೊಟ್ಟಿಗೆಯಲ್ಲಿ ಬಚ್ಚಿಟ್ಟಿದ್ದಾನೆ. ಬಾಲಕಿಯನ್ನು ಕರೆದೊಯ್ಯುವ ಹಾಗೂ ಶವವನ್ನು ಬಚ್ಚಿಡುತ್ತಿರುವ ದೃಶ್ಯಗಳು ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಪುಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಭೀಮರಾವ್ ಕಾಂಬಳೆ(65) ಎಂದು ಗುರುತಿಸಲಾಗಿದೆ. ಘಟನೆಯಿಂದ ಬೆಚ್ಚಿ ಬಿದ್ದ ಗ್ರಾಮಸ್ಥರು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದು, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.


