Kannada NewsKarnataka NewsLatest

*ತೋಂಟದಾರ್ಯ ಮಠದ ಜಾತ್ರೆಯಲ್ಲಿ ಕಳಚಿ ಬಿದ್ದ ತೊಟ್ಟಿಲುಗಳು: 20 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಗದಗದ ಸುಪ್ರಸಿದ್ದ ಲಿಂಗಾಯತ ಪೂಜ್ಯ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಮನರಂಜನೆಗಾಗಿ ಅಳವಡಿಸಲಾಗಿದ್ದ ಸುಮಾರು 20ಕ್ಕೂ ಹೆಚ್ಚು ಜೋಕಾಲಿ ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿವೆ.

ಈ ಭೀಕರ ಅಪಘಾತದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 20ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಜಾತ್ರೆಯ ಮೈದಾನದಲ್ಲಿ ಜನಜಂಗುಳಿ ಇದ್ದ ಸಂದರ್ಭದಲ್ಲೇ ಈ ಅವಘಡ ಸಂಭವಿಸಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Home add -Advt

ಜೋಕಾಲಿಯ ಕಳಪೆ ಗುಣಮಟ್ಟದ ಅಳವಡಿಕೆ ಹಾಗೂ ಸರಿಯಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಆಯೋಜಕರ ನಿರ್ಲಕ್ಷ್ಯವೇ ಈ ಘಟನೆಗೆ ಪ್ರಮುಖ ಕಾರಣ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

ಸ್ಥಳಕ್ಕೆ ಗದಗ ಶಹರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. 

Related Articles

Back to top button