*ದಾವಣಗೆರೆ ಉಪಚುನಾವಣೆ: ಮತ್ತೆ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್ ನ ಸಮರ್ಥ್ ಶಾಮನೂರು*

ಪ್ರಗತಿವಾಹಿನಿ ಸುದ್ದಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಜೊತೆಗೆ ಇಂದು ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಕೂಡ ಪ್ರಕಟವಾಗಲಿದೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಮತ ಎಣಿಕೆ ಚುರುಕುಗೊಂಡಿದೆ.
ಈಗಾಗಲೇ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವೀರಣ್ಣ ಚಿರಂತಿಮಠ ಸೋಲನುಭವಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಪಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಆರಂಭಿಕ ಹಂತದಲ್ಲಿ ಮುನ್ನಡೆಯಲ್ಲಿದ್ದರು. ಆ ಬಳಿಕ ಹಿನ್ನಡೆಯಲ್ಲಿದ್ದರು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಈಗ ೧೯ನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮುನ್ನಡೆ ಕಾಯ್ದುಕೊಂಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರು ಸಮರ್ಥ ಶಾಮನೂರು ಮನೆ ಮುಂದೆ ಜಮಾವಣೆಗೊಂಡಿದ್ದು, ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




