
ಪ್ರಗತಿವಾಹಿನಿ ಸುದ್ದಿ: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಬಂಧನಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಶಾಸಕರ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ. ಮೇ 7ರಂದು ಕೋರ್ಟ್ಗೆ ಶಾಸಕರನ್ನು ಹಾಜರುಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಕೋರ್ಟ್ ಆದೇಶ ನೀಡಿದೆ.
2023 ವಿಧಾನಸಭೆಯ ಚುನಾವಣಾ ಫಲಿತಾಂಶದ ಮರುದಿನ ದಲಿತ ಸಮಾಜದ ಬಗ್ಗೆ ಶಾಸಕ ಬಿ.ಪಿ.ಹರೀಶ್ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ಹರಿಹರ ಬಿಎಸ್ಪಿ ಮುಖಂಡ ಹನುಮಂತಪ್ಪ ಎಂಬವರು ಹರಿಹರನಗರ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.




