*ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ಇಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ ಬೆಂಗಳೂರಿನ ಕಂಪನಿಯ ಮೇಲೆ ಹಾಗೂ ದೆಹಲಿ ಸೇರಿದಂತೆ ಒಟ್ಟು 16 ಕಡೆ ದಾಳಿ ನಡೆದಿದೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಸಂಬಂಧ ದೆಹಲಿಯಲ್ಲಿ ಎಫ್ಐಆರ್ ಗಳು ದಾಖಲಾಗಿದ್ದು, ಇದನ್ನು ಆಧರಿಸಿ ಬೆಂಗಳೂರು ಘಟಕದ ಇಡಿ ಅಧಿಕಾರಿಗಳು ಗೇಮ್ಸ್ ಕ್ರಾಫ್ಟ್ ಕಂಪನಿಯ ಮೇಲೆ ದಾಳಿ ಮಾಡಿದ್ದಾರೆ
ಕೇಂದ್ರ ಸರ್ಕಾರ ಹೊಸ ಕಾನೂನು ಜಾರಿಗೆ ತಂದಿದ್ದು, ಆನ್‌ಲೈನ್ ಬೆಟ್ಟಿಂಗ್ ಶಿಕ್ಷಾರ್ಹ ಅಪರಾಧವಾಗಿದೆ. ಆನ್‌ಲೈನ್ ಮನಿ ಗೇಮ್‌ಗಳನ್ನು ನೀಡುವುದರಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 1 ಕೋಟಿ ರೂ,ವರೆಗೂ ದಂಡ ವಿಧಿಸಬಹುದು. ಆದರೆ ಅಂತಹ ಆಟಗಳನ್ನು ಜಾಹೀರಾತು ಮಾಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ.




