Kannada NewsKarnataka NewsLatest

*ಬಸ್ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಚಾಲಕ: ಭೀಕರ ಅಪಘಾತ ಸಂಭವಿಸಿದರೂ ಪ್ರಾಣಾಪಾಯದಿಂದ ಬಚಾವ್ ಆದ ಪ್ರಯಾಣಿಕರು*

ಪ್ರಗತಿವಾಹಿನಿ ಸುದ್ದಿ: ಬಸ್ ಓಡಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದು, ನಿಯಂತ್ರಣ ತಪ್ಪಿದ ಬಸ್ ಅಪಘಾತಕ್ಕೀಡಾದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಾಳತ್ ಮನೆ ಬಳಿ ಪೂರ್ಣಿಮಾಟ್ರಾವೆಲ್ ಬಸ್ ನಲ್ಲಿ ಚಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ದಿಣ್ಣೆಗೆ ಡಿಕ್ಕಿ ಹೊಡೆದಿದೆ.

ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಘಟನೆ ನಡೆದಿದೆ. ಬಸ್ ಅಪಘಾತಕ್ಕೀಡಾದರೂ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

Home add -Advt

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲನೆ ವೇಳೆಯೇ ಚಾಲಕ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Related Articles

Back to top button