Kannada NewsKarnataka NewsLatest

*ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಗನ್ ಮ್ಯಾನ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಅವರ ಗನ್ ಮ್ಯಾನ್ ನ್ ಹಾಗೂ ಆತನ ಸಹಚರನನ್ನು ಮೊಕಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಪಡಿತರ ಅಕ್ಕಿ ಸಾಗಾಣೆದಾರರಿಂದ 3 ಲಕ್ಷ ರೂಪಾಯಿ ವಸೂಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಪಿ ಸುಮನ್ ಪನ್ನೇಕರ್ ಗನ್ ಮ್ಯಾನ್ ದೇವರಾಜ್ ಹಾಗೂ ಆತನ ಸಹಚರ ಇಬ್ಬರನ್ನು ಬಂಧಿಸಲಾಗಿದೆ.

ಅಕ್ರಮ ಪಡಿತರ ಅಕ್ಕಿ ಸಾಗಾಣೆ ಮಾಡುತ್ತಿದ್ದ ಶರಭಯ್ಯ ಎಂಬುವವರಿಂದ ಹಣ ವಸೂಲಿ ಮಾಡಿದ ಆರೋಪದಡಿ ಬಂಧಿಸಲಾಗಿದೆ. ಮಡಿಕೇರಿಯಿಂದ ಆಂಧ್ರಪ್ರದೇಶದತ್ತ ಪಡಿತರ ಅಕ್ಕಿ ತುಂಬಿಕೊಂಡು ತೆರಳುತ್ತಿದ್ದ ಎರಡು ಲಾರಿಗಳನ್ನು ಅಡ್ಡಗಟ್ಟಿದ್ದ ಆರೋಪಿಗಳು, ತಾವು ಎಸ್ಪಿ ಸ್ಕ್ವಾಡ್ ಅಧಿಕಾರಿಗಳು ಎಂದು ಹೇಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ 3 ಲಕ್ಷ ರೂ. ವಸೂಲಿ ಮಾಡಿದ್ದಾಗಿ ಶರಭಯ್ಯ ದೂರು ನೀಡಿದ್ದರು.

Home add -Advt

ಹಣ ನೀಡದಿದ್ದರೆ ಲಾರಿಗಳನ್ನು ಸೀಜ್ ಮಾಡಿ ಜೈಲಿಗೆ ಕಳುಹಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾರೆಯೆಂದು ದೂರುನಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗನ್ ಮ್ಯಾನ್ ಹಾಗೂ ಆತನ ಸಹಚರನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Related Articles

Back to top button