Belagavi NewsBelgaum NewsKannada NewsKarnataka NewsLatest

*ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಐವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಖಾನಾಪುರ-ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಕಾರು-ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮದ್ನಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ, ಎದುರಿನಿಂದ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button