Kannada NewsLatestNationalPolitics

*ಪಶ್ಚಿಮ ಬಂಗಾಳ: ನೂತನ ಸಿಎಂ ಆಗಿ ಸುವೆಂದು ಅಧಿಕಾರಿ ಆಯ್ಕೆ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ*

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸುವೆಂದು ಅಧಿಕಾರಿ ಅವರನ್ನು ಆಯ್ಕೆ ಮಾಡಲಾಗಿದೆ.

Home add -Advt

ಕೋಲ್ಕತ್ತಾದ ಬಿಸ್ವಾ ಬೆಂಗಾಳ ಕನ್ವೆನ್ಷನ್ ಸೆಂಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಸುವೆಂದು ಅಧಿಕಾರಿ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಈ ವೇಳೆ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಸುವೆಂದು ಅಧಿಕಾರಿ ಅವರನ್ನು ಬಂಗಾಅಳ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಇನ್ನು ಪಶ್ಚಿಮ ಬಂಗಾಳಕ್ಕೆ ಎರಡು ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ಒಬ್ಬರು ಮಹಿಳಾ ಡಿಸಿಎಂ ಇರಲಿದ್ದಾರೆ. ನಿರೀಕ್ಷೆಯಂತೆ ಬಿಜೆಪಿ ಮಹಿಳಾ ನಾಯಕಿ ಅಗ್ನಿಮಿತ್ರಾ ಪೌಲ್ ಹಾಗೂ ಮಾಜಿ ಕೇಂದ್ರ ಸಚಿವ ನಿಸಿತ್ ಪ್ರಾಮಾಣಿಕ್ ಅವರನ್ನು ಡಿಸಿಎಂಗಳಾಗಿ ಆಯ್ಕೆ ಮಾಡಲಾಗಿದೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಕೋಲ್ಕತ್ತಾದಲ್ಲಿ ನೂತನ ಮುಖ್ಯಮಂತ್ರಿ, ಡಿಸಿಎಂಗಳ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ನಾಳೆಯಿಂದಲೇ ಬಂಗಾಳದಲ್ಲಿ ಬಿಜೆಪಿ ಅಧಿಕಾರ ಆರಂಭವಾಗಲಿದೆ.


Related Articles

Back to top button