CrimeKannada NewsKarnataka NewsLatest

*ಹೋಟೆಲ್‌ನಲ್ಲಿ ಬೆಂಕಿ ಅವಘಡ: ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ನಡೆದಿದೆ.

ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. 

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೋಟೆಲ್ ಒಳಗೆ ಸಿಲುಕಿದ್ದವರನ್ನು ಭೀಮ, ಶಿವಾನಂದ, ಸತೀಶ್ ಮತ್ತು ರಾಜಕುಮಾರ್ ಎಂದು ಗುರುತಿಸಲಾಗಿದೆ. ದುರದೃಷ್ಟವಶಾತ್, ಅತಿಯಾದ ಹೊಗೆ ಸೇವನೆಯಿಂದ ಅಸ್ವಸ್ಥರಾಗಿದ್ದ 45 ವರ್ಷದ ರಾಜಕುಮಾರ್ ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Home add -Advt

ಉಳಿದ ನಾಲ್ವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಕಾರ್ಯಾಚರಣೆ ಮುಂದುವರಿದಿದೆ. 

Related Articles

Back to top button