Kannada NewsKarnataka NewsLatest

*ಭಾರಿ ಮಳೆ: ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್‌’ ಘೋಷಿಸಿದೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸಂಜೆ ವೇಳೆಗೆ ಮಳೆಯಾಗುತ್ತಿದ್ದು ಮುಂದಿನ 48 ಗಂಟೆಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಮಳೆಯ ಜೊತೆಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Home add -Advt

Related Articles

Back to top button