Belagavi NewsBelgaum NewsCrimeKannada NewsKarnataka News

*ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಗಾಂಜಾ ಮಾರುತ್ತದ್ದ ಆರೋಪಿಯನ್ನು ಖಡೇಬಜಾರ್ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹರ್ಷಾ ಸುನೀಲ ವರ್ಮಾ(19) ಬಂದಿತ ಆರೋಪಿ. ಬೆಳಗಾವಿ ನಗರದ ಸರ್ದಾರ್ ಗ್ರೌಂಡ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಎಂಬ ಮಾದಕ ವಸ್ತುವನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುವಾಗ ಖಡೇಬಜಾರ ಠಾಣೆಯ ಇನ್ಸಪೆಕ್ಟರ್ ಮಹಾಂತೇಶ ದಾಮನ್ನವರ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. 

Home add -Advt

ಪ್ಲಾಸ್ಟಿಕ್ ಪ್ಯಾಕೆಟ್ ನಲ್ಲಿದ್ದ 272.45 ಗ್ರಾಂ ನಷ್ಟು ಗಾಂಜಾ, ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್‌ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Related Articles

Back to top button