Kannada NewsKarnataka NewsLatest

*ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕ ಬೋಟ್ ಮುಳುಗಡೆ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ಮುಳುಗಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಪ್ಸರಕೊಂಡ ಕಡಲತೀರದಲ್ಲಿ ಈ ದುರಂತ ಸಂಭವಿಸಿದೆ. ಹೊನ್ನಾವರದ ಚಂದ್ರಕಾಂತ ಖಾರ್ವಿ (38) ಸಮುದ್ರ ಪಾಲಾದ ಮೀನುಗಾರ.

ಇಂದು ಬೆಳಗ್ಗೆ ಮೀನುಗಾರಿಕೆಗೆ ಇಬ್ಬರು ಮೀನುಗಾರರು ಬೋಟ್ ತೆಗೆದುಕೊಂಡು ಹೋಗಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಸಮುದ್ರದಲ್ಲಿ ಬೃಹತ್ ಅಲೆಗಳು ಅಪ್ಪಳಿಸಲಾರಂಭಿಸಿವೆ. ಭಾರಿ ಅಲೆಗಳು ಬೋಟ್‌ಗೆ ಅಪ್ಪಳಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ಬೋಟ್ ಪಲ್ಟಿಯಾಗಿದೆ.

ಈ ವೇಳೆ ಬೋಟ್‌ನಲ್ಲಿದ್ದ ಇಬ್ಬರು ಮೀನುಗಾರರು ನೀರುಪಾಲಾಗಿದ್ದಾರೆ. ಈ ವೇಳೆ ಚಂದ್ರಕಾಂತ ಖಾರ್ವಿ ಸಮುದ್ರದಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಮೀನುಗಾರ ಕೇಶವ ಖಾರ್ವಿ ಈಜಿ ದಡ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Home add -Advt

ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button