*ರಾಜ್ಯದಲ್ಲಿ ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ, ಪ್ರಧಾನಿಯವರಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಲ್ಲಿ ಯಾವ ಕುರ್ಚಿಗಳೂ ಅಲ್ಲಾಡುತ್ತಿಲ್ಲ. ಎಲ್ಲಾ ಕುರ್ಚಿಗಳೂ ಗಟ್ಟಿಯಾಗಿವೆ. ಪ್ರಧಾನಿಯವರ ಕಣ್ಣಿಗೆ ಏನು ಕಾಣುತ್ತಿದೆಯೋ ಗೊತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ರಾಯಚೂರಿನ ಲಿಂಗಸಗೂರಿನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.
ಕರ್ನಾಟಕದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿದೆ. ಕೇರಳ, ಪಂಜಾಬ್ ನಲ್ಲೂ ಇದೇ ರೀತಿ ಆಗಿದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಈ ರೀತಿ ಉತ್ತರಿಸಿದರು.
ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಸಚಿವ ಸುಧಾಕರ್ ಅವರು ಇರಬೇಕಿತ್ತು
ಡಿ ಸುಧಾಕರ್ ಅವರ ನಿಧನದ ಬಗ್ಗೆ ಕೇಳಿದಾಗ, “ಭದ್ರಾ ಮೇಲ್ದಂಡೆ ಯೋಜನೆ ಉದ್ಘಾಟನೆಗೆ ಅವರು ನಮ್ಮೊಡನೆ ಇರಬೇಕಿತ್ತು. ಅವರ ಅನಾರೋಗ್ಯದ ಕಾರಣಕ್ಕೆ ಇದು ಸಾಧ್ಯವಾಗಲಿಲ್ಲ. ನನ್ನನ್ನ, ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿದಾಗಲೆಲ್ಲ ಸದಾ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಮನವಿ ಮಾಡುತ್ತಲೇ ಇದ್ದರು. ಜೈನ ಸಮುದಾಯಕ್ಕೆ ಸೇರಿದವರು. ಕಡಿಮೆ ಜನಸಂಖ್ಯೆ ಇದ್ದರು ಸಹ ಎಲ್ಲಾ ಸಮುದಾಯದ ಜನರನ್ನ ಪ್ರೀತಿಯಿಂದ ಕಾಣುತ್ತಿದ್ದರು. ಹೃದಯ ಶ್ರೀಮಂತಿಕೆ ಇದ್ದಂತಹ ಮನುಷ್ಯ. ಇವರ ಸಾವಿನಿಂದ ನಮ್ಮ ಸರ್ಕಾರಕ್ಕೆ, ಕ್ಷೇತ್ರಕ್ಕೆ ನಷ್ಟ ಉಂಟಾಗಿದೆ. ನನಗೆ ವೈಯಕ್ತಿಕವಾಗಿ ಬಹಳ ಆಘಾತ ಉಂಟಾಗಿದೆ” ಎಂದರು.
ಸಮಸ್ಯೆ ಪರಿಹಾರಕ್ಕೆ ಕ್ರಮ
ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆಯಾಗಿರುವ ಕುರಿತು ಕೇಳಿದಾಗ, “ನನಗೆ ಇದರ ಬಗ್ಗೆ ಗೊತ್ತಿಲ್ಲ. ನನ್ನ ಇಲಾಖೆಯಿಂದ ಕುಡಿಯುವ ನೀರು ನೀಡಲು ಆದ್ಯತೆಯಿದೆ. ಈ ಬಗ್ಗೆ ನಮ್ಮ ಅಧಿಕಾರಿಗಳ ಬಳಿ ಮಾತನಾಡಿ ಏನು ಪರಿಹಾರ ಮಾಡಬೇಕೋ ಮಾಡುತ್ತೇನೆ” ಎಂದು ಹೇಳಿದರು.
No chairs are wobbling in Karnataka; don’t know what the Prime Minister is seeing: DCM D K Shivakumar
Minister Sudhakar should have been with us for the Upper Bhadra project inauguration
Steps to resolve drinking water problem
Lingsugur, May 10: Deputy Chief Minister D K Shivakumar today categorically refuted Prime Minister Narendra Modi’s accusation that CM’s chair was wobbling in Karnataka.
Speaking to reporters at Lingasagur in Raichur district, the DCM, who is also the KPCC President, said, “No chairs are wobbling in Karnataka. All chairs are stable. I don’t know what the Prime Minister is seeing.” He was responding to PM’s statement that the CM’s chair was shaking in Karnataka, and that the same is happening in Kerala and Punjab as well.
Minister Sudhakar should have been with us for the Upper Bhadra project inauguration
When asked about the passing away of Minister D Sudhakar, he said: “He should have been with us for the Upper Bhadra inauguration. His illness prevented this from happening. Whenever he met me or the Chief Minister, he would always appeal regarding development projects for the district. He belonged to the Jain community. Even though the community is small in number, he treated people of all communities with love and affection. He was a man with a big heart. His passing is a loss to our government and to the constituency. Personally, I am deeply shocked.”
Steps to resolve the problem
When asked about the discussion in the House regarding the drinking water problem, he said: “I am not aware of this. My department gives priority to providing drinking water. I will speak with our officers about this and take whatever steps are needed to resolve the issue.”



