Kannada NewsKarnataka NewsLatest
BREAKING: ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿದೆ. ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆ ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಲಾಗಿದೆ. ಇದು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ.
ಸರ್ಕಾರಿ ನೌಕರರ ಮೂಲ ವೇತನದ ಶೇಕಡಾ 14.25 ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇಕಡಾ 15.75 ಕ್ಕೆ ಪರಿಷ್ಕರಿಸಲಾಗಿದೆ. ಅಂದರೆ ಒಟ್ಟು ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವಾದಂತಾಗಿದ್ದು,2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಇದು ಅನ್ವಯವಾಗಲಿದೆ.

