Kannada NewsLatestWorld

*ವಿಮಾನ ಲ್ಯಾಂಡಿಂಗ್ ವೇಳೆ ಬೆಂಕಿ ಅವಘಡ; ಕ್ಷಣಾರ್ಧದಲ್ಲಿ ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ: ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ.

ನೇಪಾಳದ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಟರ್ಕಿಸ್ ಏರ್ ಲೈನ್ಸ್ ವಿಮಾನದಲ್ಲಿ ಈ ಘಟನೆ ನಡೆದಿದೆ. ಇಸ್ತಾಂಬುಲ್ ನಿಂದ ಆಗಮಿಸಿದ ಟರ್ಕಿಶ್ ಏರ್ ಲೈನ್ಸ್ ವಿಮಾನವೊಂದು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿತ್ತು. ವಿಮಾನ ಲ್ಯಾಂಡಿಂಗ್ ವೇಳೆ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದೆ.

ತಕ್ಷಣ ಬೆಂಕಿಯನ್ನು ನಿಯಂತ್ರಿಸಲಾಗಿದೆ. ವಿಮಾನ ಲ್ಯಾಅಂಡಿಂಗ್ ವೇಳೆ ಟೈರ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೈಲಟ್ ಗಳ ಸಮಯ ಪ್ರಜ್ಞೆಯಿಂದ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದು, ತಕ್ಷಣ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದೆ. ವಿಮಾನದಲ್ಲಿ 11 ಸಿಬ್ಬಂದಿಗಳು ಹಾಗೂ 278 ಪ್ರಯಾಣಿಕರು ಇದ್ದರು.

Home add -Advt

Related Articles

Back to top button