Kannada NewsKarnataka NewsLatest

*ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರಿಗೆ ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಬನವಾಸಿ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಬಳಿ ಈ ಅಪಘಾತ ಸಂಭವಿಸಿದೆ. ಬನವಾಸಿಯಿಂದ ಶಿರಸಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಏಕಾಏಕಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ಮರಕ್ಕೆ ಡಿಕ್ಕಿ ಹೊಡೆದಿದೆ.

Home add -Advt

ಅಪಘಾತದಲ್ಲಿ ಶಿರಸಿ ಗುಡ್ಡದ ಮನೆ ನಿವಾಸಿಗಳಾದ ಭಾಸ್ಕರ (64) ಹಾಗೂ ಮಹೇಶ್ (54) ಗಂಭೀರವಾಗೊ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿದಲಾಗಿದೆ. ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button