Belagavi NewsBelgaum NewsKarnataka NewsLatestPolitics
*ಗೊಣ್ಣಾಗರ್ ಜಾತ್ರೆಯಲ್ಲಿ ಪಾಲ್ಗೊಂಡ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ರಾಮದುರ್ಗ ತಾಲೂಕಿನ ಗೊಣ್ಣಾಗರ್ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೇ 5ರಿಂದ 15ರ ವರೆಗೆ ನಡೆಯುತ್ತಿರುವ ಈ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡು ದೇವಿಯ ಆಶಿರ್ವಾದ ಪಡೆಯುತ್ತಿದ್ದಾರೆ. ಜಾತ್ರೆಯ ಸಂಭ್ರಮ ಕಂಡು ಖುಷಿಯಾದ ಚನ್ನರಾಜ ಹಟ್ಟಿಹೊಳಿ, ಜಾತ್ರೆ ಅತ್ಯಂತ ಶಾಂತಿಯುತವಾಗಿ ನಡೆಯಲಿ, ದೇವಿಯು ಭಕ್ತರಿಗೆ ಖಷಿ, ಸಮೃದ್ಧಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




