Belagavi NewsBelgaum NewsEducationKannada NewsKarnataka NewsNational

*ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಚೆಲ್ಲಾಟ ಆಡುತ್ತಿದೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಹೆಬ್ಬಾಳಕರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನೀಟ್‌ (NEET) ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ.

ಒಂದು ದೇಶದ ಅತ್ಯುನ್ನತ ಪರೀಕ್ಷೆಗಳನ್ನು ಕೂಡ ಪಾರದರ್ಶಕವಾಗಿ ನಡೆಸಲಾಗದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಪರೀಕ್ಷಾ ಅಕ್ರಮಗಳು ಮತ್ತು ಆಡಳಿತಾತ್ಮಕ ಅಸಮರ್ಥತೆಯಿಂದಾಗಿ ಇಂದು ನಮ್ಮ ದೇಶದ ಪ್ರತಿಭಾವಂತ ವಿದ್ಯಾರ್ಥಿಗಳು ಬೀದಿಗೆ ಬೀಳುವಂತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button