Belagavi NewsBelgaum NewsKannada NewsKarnataka NewsNational

*ಮೇ.14ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಕಾಲೇಜು ಆವರಣದಲ್ಲಿರುವ ಸರ್ಕಾರಿ ಸರದಾರ ಹೈ ಸ್ಕೂಲ್ ಆವರಣದಲ್ಲಿ ಗುರುವಾರ (ಮೇ.14) ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವೆರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವೀಧರರಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಬೆಂಗಳೂರಿನಿಂದ ಹಾಗೂ ಬೆಳಗಾವಿಯಿಂದ ಟಾಟಾ ಎಲೆಕ್ಟ್ರಾನಿಕ್ಸ್, ಫಾಕ್ಲಾನ್, ಅಡೆಕೋ, ಏಕ್ವಸ್, ಐಸಿಐಸಿಐ ಬ್ಯಾಂಕ್, ಮುತ್ತೂಟ್ ಫೈನಾನ್ಸ್, ಕ್ವೆಸ್ಟ್ ಮುಂತಾದವು ಸೇರಿ 30ಕ್ಕೂ ಹೆಚ್ಚು ಖ್ಯಾತ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುತ್ತಿವೆ.

ಹೆಚ್ಚಿನ ಮಾಹಿತಿಗಾಗಿ ಡಾ. ಶಂಶುದ್ದೀನ್ ನದಾಫ್ ಪ್ಲೇಸ್‌ಮೇಂಟ್ ಸೆಲ್ ಸಂಯೋಜಕರು ಇವರ ದೂರವಾಣಿ ಸಂಖ್ಯೆ: 9449151794/8073124146 ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Home add -Advt

Related Articles

Back to top button