EducationKannada NewsLatest

*ಸಿಬಿಎಸ್ ಇ 12ನೇ ತರಗತಿಯ ಫಲಿತಾಂಶ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ನೇ ಸಾಲಿನ 12ನೇ ತರಗತಿಯ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ.

ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಬರೆದಿದ್ದ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಹಲವು ದಿನಗಳಿಂದ ಕಾಯುತ್ತಿದ್ದರು, ಇದೀಗ ಅಧಿಕೃತವಾಗಿ ಫಲಿತಾಂಶ ಬಿಡುಗಡೆಯಾಗಿದೆ.

Home add -Advt

ಮಂಡಳಿಯು ತನ್ನ ಅಧಿಕೃತ ವೆಬ್‌ಸೈಟ್‌ಗಳಾದ cbseresults.nic.in ಮತ್ತು cbse.gov.in ನಲ್ಲಿ ಫಲಿತಾಂಶವನ್ನು ಪ್ರಕಟಿಸಿದ್ದು, ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ ಮತ್ತು ಶಾಲಾ ಕೋಡ್ ಬಳಸಿ ಅಂಕಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗಳ ಹೊರತಾಗಿ ಡಿಜಿಟಲ್ ತಂತ್ರಜ್ಞಾನದ ಮೂಲಕವೂ ಸುಲಭವಾಗಿ ಫಲಿತಾಂಶ ಪಡೆಯಬಹುದು. ಸ್ಮಾರ್ಟ್‌ಫೋನ್‌ಗಳಲ್ಲಿ DigiLocker ಅಥವಾ UMANG ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮೂಲಕ ಡಿಜಿಟಲ್ ಅಂಕಪಟ್ಟಿ ಮತ್ತು ವಲಸೆ ಪ್ರಮಾಣಪತ್ರಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.


Related Articles

Back to top button