Kannada NewsLatestNational

*ಟ್ಯಾಂಕರ್‌ ಗೆ ಬಸ್ ಡಿಕ್ಕಿ: ನಾಲ್ವರು ಪ್ರಯಾಣಿಕರು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಇಂದು ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ನಾಲ್ವರು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 10ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಿಂದ ರಾಜ್‌ಕೋಟ್‌ಗೆ ತೆರಳುತ್ತಿದ್ದ ಖಾಸಗಿ ಲುರಿ ಬಸ್, ಸುರೇಂದ್ರನಗರ ಜಿಲ್ಲೆಯ ಚೋಟಿನಾ-ರಾಜ್‌ಕೋಟ್ ರಾಷ್ಟ್ರೀಯ ಹೆದ್ದಾರಿಯ ಸಾಂಗಾನಿ ಗ್ರಾಮದ ಬಳಿ ಮುಂಜಾನೆ 2:30ರ ಸುಮಾರಿಗೆ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ. 

ಟ್ಯಾಂಕರ್‌ನ ಟೈ‌ರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ಕ್ಷಣಾರ್ಧದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಪ್ರಯಾಣಿಕರು ಗಾಬರಿಯಿಂದ ಹೊರಬರಲು ಪ್ರಯತ್ನಿಸಿದ್ದಾರೆ. ಆದರೆ ನಾಲ್ವರು ಪ್ರಯಾಣಿಕರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡ 10 ಜನರನ್ನು ತಕ್ಷಣವೇ ರಾಜ್‌ಕೋಟ್‌ನ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button